ಬೆಂಗಳೂರು: ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂಬ ಸಂಸದ ಡಾ.ಕೆ.ಸುಧಾಕರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ. ಹಗುರ ಮಾತು ಯಾರಿಗೂ ಶೋಭೆ ತರಲ್ಲ ಎಂದು ಗುಡುಗಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಮುಂದಿನ ಬಾರಿ ಸಿಎಂ ಆಗಲು ನಾನು ಸಂಘಟನೆ ಮಾಡುತ್ತಿಲ್ಲ. ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಹಗುರವಾಗಿ ಮಾತನಾಡಬಾರದು ಎಂದು ಮನವಿ ಮಾಡುತ್ತೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ನಿನ್ನೆ ಸುಧಾಕರ್ ಅವರ ಆಕ್ರೋಶಭರಿತ ಮಾತುಗಳನ್ನು ನೋಡಿದ್ದೇನೆ. ನಮ್ಮನ್ನು ಸಮಾಧಿ ಮಾಡಲು ಹೊರಟಿದ್ದಾರೆ ಎಂದಿದ್ದಾರೆ. ಈ ರೀತಿ ಆಕ್ರೋಶದ ಮಾತು ಸರಿಯಲ್ಲ. ನಾನು ಸುಧಾಕರ್ ಭೇಟಿಯಾಗಿ ಮಾತನಾಡುತ್ತೇನೆ. ನನ್ನ ಮೇಲೆ ಸುಧಾಕರ್ ಆರೋಪ ಮಾಡೋದು ಸರಿಯಲ್ಲ. ಇದರಿಂದ ಅವರಿಗೂ ಗೌರವ ಸಿಗಲ್ಲ ಪಕ್ಷಕ್ಕೂ ಗೌರವ ಇಲ್ಲ ಎಂದರು.
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…