Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ವ್ಯವಧಾನವೂ ಇಲ್ಲ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಅಧಿವೇಶನ ಆರಂಭ ಆಗುವುದಕ್ಕೂ ಮುಂಚೆ ಉತ್ತರ ಕರ್ನಾಟಕ ಭಾಗದ ಹಾಗೂ ರೈತರ ಸಮಸ್ಯೆ ಬಗ್ಗೆ ಸಮಗ್ರ ಚರ್ಚೆ ಮಾಡಲು ಒತ್ತಾಯಿಸಿದ್ದೆವು. ಇಂದು ಹಾಗೂ ನಾಳೆ ಈ ಬಗ್ಗೆ ಚರ್ಚೆ ಮಾಡುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿದ್ದರು. ಆದರೆ ಈ ನಡುವೆ ಆಡಳಿತ ಪಜಕ್ಷದ ಮುಖಂಡರು ಯಾವುದೇ ಚರ್ಚೆ ಮಾಡುವುದಕ್ಕೆ ತಯಾರಿಲ್ಲ ಎಂದು ಕಿಡಿಕಾರಿದರು.

ಸದನದಲ್ಲಿ ಮುನಿರತ್ನ ಕುರಿತು ಚರ್ಚೆ ಮಾಡಲು ಮುಂದಾಗಿದ್ದಾರೆ. ನಾವು ಈ ಚರ್ಚೆಗೆ ಅವಕಾಶ ಮಾಡಲು ಬಿಡಲ್ಲ. ನಾವು ಹಾಗೂ ಜೆಡಿಎಸ್‌ ಶಾಸಕರು ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಇನ್ನು ರಾಜ್ಯದಲ್ಲಿ ಕಬ್ಬು ಬೆಳೆಗಾರರು, ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಗುಲಬರ್ಗಾ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ತೊಗರಿ ಬೆಳೆ ನಾಶವಾಗಿದೆ. ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸಮರ್ಪಕ ಉತ್ತರ ನೀಡಲಿ ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಮೇಲೆ 150 ಕೋಟಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರಿಯಾಂಕ್‌ ಖರ್ಗೆ ಸದನದಲ್ಲಿ ಆರೋಪ ಮಾಡಿದ್ದಾರೆ. ಈ ಬಗ್ಗೆ ನಾನು ಸದನದಲ್ಲೇ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದರು.

Tags: