ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ವಸೂಲಿ ಮಾಡಬಹುದು ಎಂಬ ಮಾತನ್ನು ರಾಜ್ಯ ಸರ್ಕಾರ ಹೇಳುತ್ತಿರುವುದು ದುರ್ದೈವದ ಸಂಗತಿ.
ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಷ್ಟೆಲ್ಲಾ ಬೆಳವಣಿಗೆಗಳಾದರೂ ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರೂ ರಾಜ್ಯ ಸರ್ಕಾರ ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ, ರೈತರ ರಕ್ಷಣೆಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…