ರಾಜ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗೆ ವಸೂಲಿ ಮಾಡಬಹುದು ಎಂಬ ಮಾತನ್ನು ರಾಜ್ಯ ಸರ್ಕಾರ ಹೇಳುತ್ತಿರುವುದು ದುರ್ದೈವದ ಸಂಗತಿ.

ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಷ್ಟೆಲ್ಲಾ ಬೆಳವಣಿಗೆಗಳಾದರೂ ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರೂ ರಾಜ್ಯ ಸರ್ಕಾರ ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ, ರೈತರ ರಕ್ಷಣೆಗೆ ಧಾವಿಸಬೇಕು ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

36 mins ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

56 mins ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

1 hour ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

2 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

2 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

8 hours ago