ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಅಧಿವೇಶನ ಆರಂಭ ಆಗುವುದಕ್ಕೂ ಮುಂಚೆ ಉತ್ತರ ಕರ್ನಾಟಕ ಭಾಗದ ಹಾಗೂ ರೈತರ ಸಮಸ್ಯೆ ಬಗ್ಗೆ ಸಮಗ್ರ ಚರ್ಚೆ ಮಾಡಲು ಒತ್ತಾಯಿಸಿದ್ದೆವು. ಇಂದು ಹಾಗೂ ನಾಳೆ ಈ ಬಗ್ಗೆ ಚರ್ಚೆ ಮಾಡುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿದ್ದರು. ಆದರೆ ಈ ನಡುವೆ ಆಡಳಿತ ಪಜಕ್ಷದ ಮುಖಂಡರು ಯಾವುದೇ ಚರ್ಚೆ ಮಾಡುವುದಕ್ಕೆ ತಯಾರಿಲ್ಲ ಎಂದು ಕಿಡಿಕಾರಿದರು.
ಸದನದಲ್ಲಿ ಮುನಿರತ್ನ ಕುರಿತು ಚರ್ಚೆ ಮಾಡಲು ಮುಂದಾಗಿದ್ದಾರೆ. ನಾವು ಈ ಚರ್ಚೆಗೆ ಅವಕಾಶ ಮಾಡಲು ಬಿಡಲ್ಲ. ನಾವು ಹಾಗೂ ಜೆಡಿಎಸ್ ಶಾಸಕರು ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.
ಇನ್ನು ರಾಜ್ಯದಲ್ಲಿ ಕಬ್ಬು ಬೆಳೆಗಾರರು, ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಗುಲಬರ್ಗಾ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ತೊಗರಿ ಬೆಳೆ ನಾಶವಾಗಿದೆ. ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸಮರ್ಪಕ ಉತ್ತರ ನೀಡಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಮೇಲೆ 150 ಕೋಟಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಸದನದಲ್ಲಿ ಆರೋಪ ಮಾಡಿದ್ದಾರೆ. ಈ ಬಗ್ಗೆ ನಾನು ಸದನದಲ್ಲೇ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…