ಶಿವಮೊಗ್ಗ: ಜನವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆದರೆ ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. ಒಬಿಸಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡಿದರೆ ನನ್ನನ್ನು ಪರಿಗಣಿಸುವಂತೆ ಕೋರಿದ್ದೇನೆ ಎಂದರು.
ಕಳೆದ ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ. ಒಬಿಸಿ ಸಮುದಾಯಕ್ಕೆ ಆದ್ಯತೆ ನೀಡಿದರೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ ಎಂದರು.
ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗಬಹುದೆಂಬ ನಿರೀಕ್ಷೆಯಿದೆ. ಪಕ್ಷದಲ್ಲಿನ ಭಿನ್ನಮತದ ಬಗ್ಗೆ ವರಿಷ್ಠರು ಗಮನಹರಿಸಿದ್ದಾರೆ. ಶೀಘ್ರದಲ್ಲೇ ಪಕ್ಷದ ಹೈಕಮಾಂಡ್ ತೀಕ್ಷ್ಣವಾದ ನಿರ್ಧಾರ ಕೈಗೊಳ್ಳಲಿದೆ ಎಂದರು.





