Mysore
24
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲವಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

_B Y Vijayendra

ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಪರಿಣಾಮ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಜಿಎಸ್‌ಟಿ ಟ್ಯಾಕ್ಸ್‌ ನೋಟಿಸ್‌ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸಣ್ಣ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ನೀಡುತ್ತಿರುವುದು ಸರಿಯಲ್ಲ. ಇದನ್ನು ರಾಜ್ಯ ಸರ್ಕಾರವೇ ಮಾಡಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಹಣ ಸಂಗ್ರಹಕ್ಕೆ ರಾಜ್ಯ ಸರ್ಕಾರ ಅಧಿಕಾರಿಗಳ ಮೂಲಕ ಸಣ್ಣ ಸಣ್ಣ ವ್ಯಾಪಾರಿಗಳಿಗೆ ನೋಟಿಸ್‌ ನೀಡುತ್ತಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ. ಅಕ್ರಮ ನಡೆಸುತ್ತಿರುವುದು ರಾಜ್ಯ ಸರ್ಕಾರ. ಹೀಗಾಗಿ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ. ಅನೇಕ ವಸ್ತುಗಳು ಜಿಎಸ್‌ಟಿ ವ್ಯಾಪ್ತಿಗೆ ಬರುವುದೇ ಇಲ್ಲ ಎಂದು ಹೇಳಿದರು.

Tags:
error: Content is protected !!