_B Y Vijayendra
ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಪರಿಣಾಮ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಜಿಎಸ್‌ಟಿ ಟ್ಯಾಕ್ಸ್ ನೋಟಿಸ್‌ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸಣ್ಣ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡುತ್ತಿರುವುದು ಸರಿಯಲ್ಲ. ಇದನ್ನು ರಾಜ್ಯ ಸರ್ಕಾರವೇ ಮಾಡಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಹಣ ಸಂಗ್ರಹಕ್ಕೆ ರಾಜ್ಯ ಸರ್ಕಾರ ಅಧಿಕಾರಿಗಳ ಮೂಲಕ ಸಣ್ಣ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡುತ್ತಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ. ಅಕ್ರಮ ನಡೆಸುತ್ತಿರುವುದು ರಾಜ್ಯ ಸರ್ಕಾರ. ಹೀಗಾಗಿ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ. ಅನೇಕ ವಸ್ತುಗಳು ಜಿಎಸ್‌ಟಿ ವ್ಯಾಪ್ತಿಗೆ ಬರುವುದೇ ಇಲ್ಲ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…