Categories: ರಾಜ್ಯ

ಬಿಜೆಪಿಯವರು ಸಾವಿರ ಕೋಟಿ ಬಗ್ಗೆ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್‌ ಟಾಂಗ್‌

ಬೆಂಗಳೂರು: ಬಿಜೆಪಿ ನಾಯಕರು 100 ಅಲ್ಲ 1,000 ಸಾವಿರ ಕೋಟಿ ಬಗ್ಗೆ ಮಾತನಾಡಲಿ ನನಗೆ ಏನು ಸಮಸ್ಯೆ ಇಲ್ಲ. ಆದರೆ ಈ ಬಗ್ಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಇಂದು(ನ.18) ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ಆಫರ್‌ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು 100 ಕೋಟಿಯಲ್ಲ 1,000 ಕೋಟಿಯ ಬಗ್ಗೆ ಮಾತನಾಡಲಿ. ಮೊದಲು ಈ ವಿಚಾರದ ಬಗ್ಗೆ ಬಸವನಗೌಡ ಪಾಟೀಲ್‌ ಯತ್ನಾಳ್‌ರವರನ್ನು ಪ್ರಶ್ನಿಸಬೇಕು ಎಂದರು.

ನೀವೂ ಯಾಕೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪ್ರಶ್ನೆಗಳನ್ನು ಕೇಳಲ್ಲ. ಆದರೆ ನಮ್ಮನ್ನು ಮಾತ್ರ ಪ್ರಶ್ನಿಸುತ್ತಿರಾ? ನಮ್ಮನ್ನು ಪ್ರಶ್ನೆ ಕೇಳಿದರೆ ನಾವೇನು ಏನು ಹೇಳೋಕೆ ಸಾಧ್ಯ. ಮೊದಲು ಅವರು ಆಂತರಿಕ ತನಿಖೆ ಮಾಡಲಿ, ನಮ್ಮ ಸರ್ಕಾರವೂ ಸಹ ಈ ಬಗ್ಗೆ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

9 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

4 hours ago