Mysore
20
clear sky

Social Media

ಬುಧವಾರ, 18 ಮಾರ್ಚ್ 2026
Light
Dark

ರೈತರ ಸಮಸ್ಯೆ ಪರವಾಗಿ ಬಿಜೆಪಿಯಿಂದ ಪಾದಯಾತ್ರೆ: ಆರ್.‌ಅಶೋಕ್‌ ಘೋಷಣೆ

r ashok

ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ತುಂಬಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸರ್ಕಾರ ರೈತರಿಗೆ ಹಣ ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆಗ್ರಹಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ 400 ಕೋಟಿ ರೂಪಾಯಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.

ಸರ್ಕಾರದ ಖಜಾನೆ ತುಂಬಿರುವಾಗ ರೈತರಿಗೆ ಯಾಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ರೈತರ ಪರ ನಾವೆಲ್ಲಾ ಹೋರಾಟ ನಡೆಸುತ್ತೇವೆ. ರಾಜ್ಯಾದ್ಯಂತ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದರು.

Tags:
error: Content is protected !!