ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ನಟ್ಟು, ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ ಒಳಜಗಳಕ್ಕೆ ಕೊನೆಮೊದಲು ಎಂಬುದಿಲ್ಲ. ರಾಜ್ಯ ಕಾಂಗ್ರೆಸ್ಸಿನ ನಟ್ಟು ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷರೇ ಫೀಲ್ಡಿಗೆ ಇಳಿದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಹಲಾಲ್ ಬಜೆಟ್ ಕೊನೆಯದ್ದಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಪ್ರತಿಪಾದಿಸುತ್ತಿದ್ದರೆ, ಇನ್ನೂ 3 ಬಜೆಟ್ ಸಿದ್ದರಾಮಯ್ಯ ಅವರೇ ಮಂಡಿಸಲಿದ್ದಾರೆ ಎಂದು ಸಿದ್ದರಾಮಯ್ಯ ಬಣ ಹೇಳುವ ಮೂಲಕ ಎರಡೂವರೆ ವರ್ಷದ ಒಪ್ಪಂದವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಇದರಿಂದ ಎರಡೂ ಬಣಗಳಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ ಎಂದು ಟೀಕಿಸಿದೆ.
ಕಾಂಗ್ರೆಸ್ಸಿನ ಈ ಒಳಜಗಳದಿಂದ ರಾಜ್ಯದ ಆಡಳಿತ ಯಂತ್ರ ನಟ್ಟು ಬೋಲ್ಟುಗಳೂ ಕಳಚಿಕೊಂಡಿದೆ. ಅಭಿವೃದ್ಧಿ ಎನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಒಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಶೂನ್ಯ ಅಭಿವೃದ್ಧಿ, ಒಟ್ಟಿನಲ್ಲಿ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ದಿವಾಳಿಗೊಳಿಸುತ್ತಿದೆ ಎಂದು ಆರೋಪಿಸಿದೆ.
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…