ಬೆಂಗಳೂರು: ಡಿಕೆಶಿಯನ್ನು ನೇರವಾಗಿ ಎದುರಿಸಲು ಸಾಧ್ಯವಾಗದೇ ಹಿಂಬಾಗಿಲ ಮೂಲಕ ಹಣೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶ ಮನಸ್ಥಿತಿಯಿಂದ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ. ನೇರವಾಗಿ ರಾಜಕೀಯ ಮಾಡಬೇಕೆ ಹೊರತು ತೆರೆಮರೆಯಲ್ಲಿ ಅಲ್ಲ ಎಂದು ಟೀಕಿಸಿದರು.
ಡಿಕೆ ಶಿವಕುಮಾರ್ ಅವರ ಒಂದು ವೀಡಿಯೊ ತುಣುಕು ಇಟ್ಟುಕೊಂಡು ಬಿಜೆಪಿ ಅವರ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಮತ್ತೇ ಬೆತ್ತಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಎಂದಿಗೂ ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಸಂವಿಧಾನದ ಬಗ್ಗೆ ಬಿಜೆಪಿ ಹಾಗೂ ಸಂಘ ಪರಿವಾರದಿಂದ ಹೇಳಿಸಿಕೊಳ್ಳುವ ಸಂದರ್ಭ ಕಾಂಗ್ರೆಸ್‌ಗೆ ಬಂದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಅಧ್ಯಕ್ಷರ ಮಾಧ್ಯಮ ಮತ್ತು ರಾಜಕೀಯ ಕಾರ್ಯದರ್ಶಿ ದೀಪಕ್ ತಮ್ಮಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಇದ್ದರು.





