ರಾಜ್ಯ

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ: ಸಿಎಂ ಸಿದ್ದರಾಮಯ್ಯ ಆರೋಪ

  • ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ
  • ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭವಲ್ಲ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು, ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ

ಸಿದ್ದರಾಮಯ್ಯನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಸೇರಿ, ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಬಾಕಿ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಲು ರಾಜ್ಯಪಾಲರಿಗೆ ಒತ್ತಾಯ

ಮುಡಾ ಪ್ರಕರಣದಲ್ಲಿ ಸಿಎಂ ಅವರು ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಜಯೇಂದ್ರ ತಿಳಿಸಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ, ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜ್ಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ ಎಂದು ತಿಳಿಸಿದರು.

ಪರಿಸರ ತೀರುವಳಿ ಬಂದ ತಕ್ಷಣ ಮಹಾದಾಯಿಗೆ ಚಾಲನೆ

ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದವಿದೆ.ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

16 ನೇ ಹಣಕಾಸು ಆಯೋಗ ರಾಜ್ಯದ ಅನುದಾನ ಕೊರತೆ ನೀಗಿಸುವ ವಿಶ್ವಾಸ

ನಿನ್ನೆ 16 ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ತೆರಿಗೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು , 1.66 ರಷ್ಟು ಪ್ರಮಾಣ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರ್ಉ 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16 ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ನಟ ದರ್ಶನ್ ಪ್ರಕರಣ: ತಪ್ಪೆಸೆಗಿರುವ ಅಧಿಕಾರಿಗಳ ಅಮಾನತು

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ನಿಟ್ಟಿನಲ್ಲಿ ಕರ್ತವ್ಯ ಲೋಪ ಎಸಗಿದ್ದ 9 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಜೊತೆಗೆ ಉಳಿದ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಕಳಿಸಲಾಗಿದ್ದು, ಇಂತಹ ತಪ್ಪು ನಡೆದ ಜೈಲಿನ ಡಿಜಿಪಿಗೆ ನೋಟೀಸನ್ನೂ ನೀಡಲಾಗಿದೆ ಎಂದರು.

ಮುಡಾದ ಮಾಜಿ ಆಯುಕ್ತರ ಮೇಲೆ ಆರೋಪವಿದ್ದು, ಅವರನ್ನು ಹಾವೇರಿ ವಿವಿಗೆ ಕುಲಸಚಿವರಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago