ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಪಕ್ಷ, ಕಾಂಗ್ರೆಸ್ ನಾಯಕರು ಪ್ರಚಾರದ ತೆವಲಿಗೆ ಬಿದ್ದು, ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮವನ್ನು ವಿಧಾನಸೌಧದ ಮುಂಭಾಗ ಆಯೋಜನೆ ಮಾಡಿ 11 ಅಮಾಯಕ ಅಭಿಮಾನಿಗಳನ್ನು ಬಲಿ ಪಡೆದರು.
ಕಾಲ್ತುಳಿತ ಪ್ರಕರಣಕ್ಕೆ ಪೊಲೀಸರೇ ಕಾರಣ ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ನರಿ ಬುದ್ಧಿ ತೋರಿಸಿದೆ. ಅಸಲಿಗೆ 11 ಜನರನ್ನು ಬಲಿ ಪಡೆದಿದ್ದು ಸಿಎಂ ಸಿದ್ದರಾಮಯ್ಯ. ಈ ಘಟನೆ ನಡೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕಾರಣ ಹೊರತು ಪೊಲೀಸರಲ್ಲ ಎಂದು ವಾಗ್ದಾಳಿ ನಡೆಸಿದೆ.





