ರಾಜ್ಯ

ಸಮಾಜದಲ್ಲಿ ಅಸಮಾನತೆ ಬಯಸುವ ಬಿಜೆಪಿ : ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು : ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು.

ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

ಇದನ್ನೂ ಓದಿ:-ಡಿಕೆಶಿ ನವೆಂಬರ್‌ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್‌ ಆರ್‌ ಶಿವರಾಮೇಗೌಡ

ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.

ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ
ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದುಎಂದರು.

ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ
ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

26 mins ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

51 mins ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

1 hour ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

2 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

2 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

2 hours ago