ಬೆಳಗಾವಿ: ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಆ ದಿಕ್ಕಿನಲ್ಲಿ ನಾವು ಒಟ್ಟಾಗಿ ಸೇರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬಿಜೆಪಿಗರಿಗೆ ಏನೂ ಸಲಹೆ ಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಶ್ರಮ ವಹಿಸುತ್ತೇವೆ. ಹೈಕಮಾಂಡ್ ಸಲಹೆ ಪಡೆದು ಪಕ್ಷ ಸಂಘಟನೆಗೆ ಮುಂದಾಗುತ್ತೇವೆ. ಮುಂದಿನ ಬಾರಿ ನಮ್ಮದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.





