ರಾಜ್ಯ

ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ: ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ಹಿಂದೂ ವಿರೋಧಿ ಕುಯುಕ್ತಿ ಚಟುವಟಿಕೆಗಳು ಮತ್ತೆ ತಲೆಯೆತ್ತಿದರೆ ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ‘ಸಂದಿಯಲ್ಲಿ ಸಮಾರಾಧನೆ’ ಮಾಡುವಂತೆ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆಯ ಹೆಸರಿನಲ್ಲಿ ಮತಾಂತರಕ್ಕೆ ಪರೋಕ್ಷ ಪ್ರೇರಣೆ ನೀಡಲು ಹೊರಟು ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನಲ್ಲಿ ಪ್ರಕಟಿಸಿದ್ದ ಹುನ್ನಾರವನ್ನು ಸಮಯೋಚಿತವಾಗಿ ಬಯಲಿಗೆಳೆದ ಪರಿಣಾಮವಾಗಿ ಜನಾಕ್ರೋಶಕ್ಕೆ ಹೆದರಿ ಸರ್ಕಾರ ಆ ಹೆಸರುಗಳ ಪಟ್ಟಿಯನ್ನು ಬೇಷರತ್ತಾಗಿ ಕೈ ಬಿಡಿಸಿರುವುದು ಹಿಂದೂ ಸಮಾಜದ ಒಗ್ಗಟ್ಟಿನ ಆಕ್ರೋಶದ ಪ್ರತಿಫಲನವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ: ಇಷ್ಟು ದಿನ‌ ಹಿಂದೂ ವಿರೋಧಿಯಾಗಿದ್ದ ಸಿ‌ಎಂ, ಈಗ ಪೊಲೀಸ್ ಇಲಾಖೆ ವಿರೋಧಿ: ಪ್ರತಾಪ್‌ ಸಿಂಹ 

ಬಿಜೆಪಿ ಹಾಗೂ ಜಾಗೃತ ಹಿಂದೂ ಸಮುದಾಯಗಳ ಪ್ರತಿಭಟನೆಗೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಬೆಚ್ಚಿಬಿದ್ದಿದೆ. ಅದರ ಪರಿಣಾಮವಾಗಿ ಹಿಂದುಳಿದ ವರ್ಗಗಳ ಆಯೋಗ ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನೊಂದಿಗೆ ಸೇರಿಸಿ ಪ್ರಕಟಿಸಿದ್ದ ಪಟ್ಟಿ ‘ಗುಂಡಿಗೆ’ ಬಿದ್ದಿದೆ. ಅಲ್ಪಸಂಖ್ಯಾತರನ್ನು ಓಲೈಸುವುದೇ ತನ್ನ ಆದ್ಯತೆಯ ಕಾರ್ಯಸೂಚಿಯನ್ನಾಗಿರಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ವಿರುದ್ಧ ಸಂದರ್ಭ ಬಂದಾಗಲೆಲ್ಲ ಕುತಂತ್ರ ಹೆಣೆಯುವುದರಲ್ಲಿ ನಿಸ್ಸೀಮತನ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

2 hours ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

2 hours ago

28 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…

2 hours ago

ರಾಗಿ ಖರೀದಿ ಕೇಂದ್ರದಲ್ಲಿ ಹೆಚ್ಚುತ್ತಿರುವ ಅಕ್ರಮ: ಆರೋಪ

ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…

2 hours ago

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

11 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

12 hours ago