ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್‌ ಯು.ಟಿ.ಖಾದರ್‌ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು ನಡುವೆ ಈ ವಿಷಯ ತರಲಾಗಿದೆ. ಇದು ಸದನಕ್ಕೆ ಹಾಗೂ ಸ್ಪೀಕರ್‌ಗೆ ಗೌರವ ತರುವ ಕೆಲಸವಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸದಸ್ಯರು ಮಾತನಾಡುವಾಗ ಅವರನ್ನು ಒತ್ತಾಯಪೂರ್ವಕವಾಗಿ ಸ್ಪೀಕರ್‌ ಕೂರಿಸುತ್ತಿದ್ದಾರೆ. ಇದು ಸದನಕ್ಕೆ ಅಥವಾ ಸ್ಪೀಕರ್‌ಗೆ ಗೌರವ ತರುವುದಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಸದನ ನಡೆದಿಲ್ಲ. ಸ್ಪೀಕರ್‌ ಸದನ ನಡೆಸಲು ಸಂಪೂರ್ಣ ವಿಫಲರಾಗಿದ್ದಾರೆ. ಇಂತಹ ಸ್ಪೀಕರ್‌ರಿಂದ ನಾವು ಏನೂ ನಿರೀಕ್ಷೆ ಮಾಡಲಾಗುವುದಿಲ್ಲ. ಮಳೆ ಹಾನಿ ಕುರಿತು 15 ದಿನಗಳ ಹಿಂದೆಯೇ ಹೇಳಬೇಕಿತ್ತು. ಸ್ಪೀಕರ್‌ ನಡೆ ಸದನಕ್ಕೆ ಗೌರವ ತರುವುದಿಲ್ಲ. ಸೋಮವಾರದ ಅಧಿವೇಶನದಲ್ಲಿ ಬಿಜೆಪಿ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದರೆ ಅದು ಕಾಂಗ್ರೆಸ್‌ ಸರ್ಕಾರದ ಪ್ರಾಯೋಜಿತ ಕೊಲೆ. 187 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಲೂಟಿ ಮಾಡಿ ಚುನಾವಣೆಗೆ ಬಳಸಿದ್ದಾರೆ ಎಂಬುದು ಜಾರಿ ನಿರ್ದೇಶನಾಲಯದ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟವಾಗಿದೆ. ಈ ಕುರಿತು ಸದನದಲ್ಲಿ ನಿಲುವಳಿ ಸೂಚನೆಯಲ್ಲಿ ಮಾತನಾಡಲಾಗಿದೆ. ಲೂಟಿಯಾದ ಹಣವನ್ನು ಯಾವಾಗ ವಾಪಸ್‌ ತರಲಾಗುತ್ತದೆ ಎಂದು ನಾವು ಪ್ರಶ್ನೆ ಮಾಡಿದ್ದೇವೆ. ಇದು ಎಟಿಎಂ ಸರ್ಕಾರದ ಮೂಲಕ ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ತಲುಪಿದೆಯೇ ಎಂದು ಕೇಳಿದ್ದೇವೆ ಎಂದರು.

ಈ ಹಗರಣ ಮಾಡಿದ ತಪ್ಪಿತಸ್ಥರಿಗೆ ಶಿಕ್ಷಯಾಗಬೇಕೆಂದರೆ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್‌ ಅವರ ಹೆಸರು ಎಫ್‌ಐಆರ್‌ನಲ್ಲಿ ಬರಬೇಕು. ಆದರೆ ಇವರಿಬ್ಬರ ಹೆಸರು ಕೂಡ ಎಫ್‌ಐಆರ್‌ನಲ್ಲಿ ಬಾರದಂತೆ ಮಾಡಲು ಪೊಲೀಸರಿಗೆ ಒತ್ತಡ ಹೇರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದಿಂದ ಭಾಷಣ ಮಾಡಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾರೂ ಭಾಗಿಯಾಗಿಲ್ಲ ಎಂದಿದ್ದಾರೆ. ಆದರೆ ಸಚಿವರು ರಾಜೀನಾಮೆ ನೀಡಿದ್ದಾರೆ. ಹಣ ಲೂಟಿಯಾಗಿದೆ ಎಂದು ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. 40 ಪರ್ಸೆಂಟ್‌ ಎಂದು ಭಿತ್ತಿಪತ್ರ ಅಂಟಿಸಿ, ಅಧಿಕಾರಕ್ಕೆ ಬಂದ ಮೇಲೆ ತನಿಖೆಗೆ ವಹಿಸಿದ್ದಾರೆ. ಆದರೆ ಇದರ ವರದಿ ಮಾತ್ರ ಬಂದಿಲ್ಲ. ಆದರೂ ಬಿಜೆಪಿ ಹಗರಣ ಮಾಡಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಪ್ರಶ್ನೆ ಮಾಡಿದ ನಂತರ ದಿಢೀರನೆ ಹಳೆ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಗರಣದಲ್ಲಿ ಭಾಗಿಯಾಗಿದ್ದು, ರಾಜೀನಾಮೆ ಕೊಡಬೇಕಿತ್ತು. ಆದರೆ ಅದನ್ನೂ ಮಾಡಿಲ್ಲ, ಸಿಬಿಐ ತನಿಖೆಗೂ ವಹಿಸಿಲ್ಲ. ಹಗರಣವನ್ನು ಮುಚ್ಚಿಹಾಕಲು ಎಲ್ಲ ವ್ಯವಸ್ಥಿತ ಸಂಚು ಮಾಡಲಾಗಿದೆ. ಬಿಜೆಪಿಯಿಂದ ಇದರ ವಿರುದ್ಧ ತೀವ್ರ ಹೋರಾಟ ಮುಂದುವರಿಯಲಿದೆ. ದಲಿತರ ಹಣ ವಾಪಸ್‌ ಸಿಗಬೇಕು, ಅಪರಾಧಿಗಳಿಗೆ ಶಿಕ್ಷೆ ಸಿಗಬೇಕು ಎಂಬುದು ಬಿಜೆಪಿಯ ಬೇಡಿಕೆ ಎಂದರು.

ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಹಾನಿಯಾಗಿ ಜನರು ಸತ್ತಿದ್ದರೂ ಸಚಿವರು ಘಟನಾ ಸ್ಥಳಕ್ಕೆ ಹೋಗಿ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಹಾನಿಗೊಳಗಾದವರಿಗೆ ಬಿಜೆಪಿ ಸರ್ಕಾರ 10,000 ರೂ. ಪರಿಹಾರ ನೀಡುತ್ತಿತ್ತು. ಈಗ ಸರ್ಕಾರ ಪರಿಹಾರವನ್ನು 5,000 ರೂ. ಗೆ ಇಳಿಸಿದೆ. ಮನೆ ಕಳೆದುಕೊಂಡವರಿಗೆ ಬಿಜೆಪಿ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಈಗ ಅದು ಕೂಡ ಇಲ್ಲ. ಸರ್ಕಾರ ದಿವಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

5 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

6 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

6 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

6 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

6 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

6 hours ago