ಬೆಂಗಳೂರು: ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ(ಏ.೬) ಹೇಳಿದ್ದಾರೆ.
ಬರ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿದ್ದಾರೆ. ಅವರು ತಪ್ಪು ಮಾಹಿತಿಯ ಮಂತ್ರಿ ಆಗಿರಬೇಕು ಎಂದು ಟೀಕಿಸಿದ್ದಾರೆ.
ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿಗೆ 200 ಸೀಟು ಬರುವುದಿಲ್ಲ ಎಂದು ಆರ್‌ಎಸ್‌ಎಸ್ ಹೇಳುತ್ತಿದೆ. ರಾಜ್ಯದಲ್ಲಿ ಬಿಜೆಪಿ ಎಂಟು ಸೀಟು ದಾಟುವುದಿಲ್ಲ. ಹದಿನಾಲ್ಕರಿಂದ ಹದಿನೈದು ಸೀಟುಗಳಲ್ಲಿ ಅವರು ಹೇಗೆ ಗೆಲ್ಲುತ್ತಾರೆ? ಎಂದು ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು.
ಕೆಲವು ಬಿಜೆಪಿ ನಾಯಕರು ಒಂದು ಕುಟುಂಬದಿಂದ ರಾಜ್ಯದಲ್ಲಿ ಬಿಜೆಪಿ ಕಲುಷಿತವಾಗಿದೆ ಎಂದು ಹೇಳುತ್ತಿದ್ದಾರೆ, ಅವರು ಮೂಲ ಬಿಜೆಪಿಯನ್ನು ಮರುಸ್ಥಾಪಿಸಲು ಬಯಸುತ್ತಿರುವುದಾಗಿ ಹೇಳುತ್ತಿದ್ದಾರೆ. ನಾವು ಅದನ್ನು ಹೇಳುತ್ತೇವೆಯೇ? ಇಲ್ಲ, ಅವರೇ ಬಿಜೆಪಿಯಲ್ಲಿ ಹಿಂದುತ್ವವಾದಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಅನಂತ್‌ಕುಮಾರ್ ಹೆಗಡೆ, ಈಶ್ವರಪ್ಪ ಅವರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದಾರೆ ಎಂದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…