Mysore
25
haze

Social Media

ಬುಧವಾರ, 28 ಜನವರಿ 2026
Light
Dark

ಸಾರಿಗೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ: ಪಿ.ರಾಜೀವ್‌

ಬೆಂಗಳೂರು: ಸಾರಿಗೆ ನೌಕರರಿಗೆ ಬಾಕಿ ಬರಬೇಕಾದ ಹಣವನ್ನು ರಾಜ್ಯ ಸರ್ಕಾರ ಕೊಡದೆ ಇರುವುದರಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಇದಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಹೇಳಿದ್ದಾರೆ.

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಅವರು, ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7401 ಕೋಟಿ ಹಣ ಬಾಕಿ ಬರಬೇಕಿದೆ. ಶಕ್ತಿ ಯೋಜನೆಗೆ 1788 ಕೋಟಿ ಹಣ ಬಾಕಿ ಇದೆ. ಆದರೂ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಹಣದ ಕೊರತೆ ಇಲ್ಲ ಎಂದು ಹೇಳುತ್ತಾ ಜಾತ್ರೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ ಎಂದು ಹೇಳುತ್ತಾರೆ. ಆದರೆ ಇಷ್ಟು ಬಾಕಿ ಕೊಡದ ಸಿಎಂ ಹೇಗೆ ಸಾಧನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಇತ್ತೀಚಿಗೆ ಸಿಎಸ್‌ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಗಮಕ್ಕೆ 3650 ಕೋಟಿ ಹಣ ನಷ್ಟದ ಕುರಿತು ಚರ್ಚಿಸಿದರು. ಈ ನಷ್ಟ ತುಂಬಿಸಲು ನಿಗಮದ 200 ಎಕರೆ ಜಾಗ ಆದಾಯ ಕ್ರೋಢಿಕರಣಕ್ಕಾಗಿ ಬಳಸಲು ಹಾಗೂ 15% ಪ್ರಯಾಣದ ದರ ಹೆಚ್ಚಿಸಲು ಸಿಎಸ್‌ ಸಭೆಯಲ್ಲಿ ಸಲಹೆ ನೀಡಿದ್ದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಮೇಲಾಗಿದೆ. ಆದರೆ ಸರ್ಕಾರ 1 ಲಕ್ಷ 5 ಸಾವಿರ ಕೋಟಿ ಸಾಲ ಮಾಡುವ ಮೂಲಕ ದಿವಾಳಿ ಆಗಿದೆ ಎಂದು ಆರೋಪಿಸಿದರು.

ಈ ಸರ್ಕಾರದ ಆಡಳಿತದಲ್ಲಿ ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡಿದ್ದಾರೆ. ರೈತರ ಪಂಪ್‌ಸೆಟ್‌ಗೆ ಕೊಡ್ತಿದ್ದ 25 ಸಾವಿರ ಸಬ್ಸಿಡಿ ಕಟ್ ಮಾಡಿದ್ದಾರೆ. ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಿದೆ. ಆದರೂ ಸಾರಿಗೆ ನಿಗಮಕ್ಕೆ ಹಣ ನೀಡಿಲ್ಲ. ಆದ್ದರಿಂದ ಸಾರಿಗೆ ನೌಕರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

 

Tags:
error: Content is protected !!