ರಾಜ್ಯ

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಹೆಚ್ಚಳ ಮಾಡಿದ್ದು ತನ್ನ ಬಡವರ ವಿರೋಧಿ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಮಾರ್ಚ್ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರ ಸುಮಾರು 1300 ರೂ. ಹೆಚ್ಚಳವಾಗಿದೆ. ಹೊಟೆಲ್ ಮಾಲೀಕರು ಅನಿವಾರ್ಯವಾಗಿ ಊಟ, ತಿಂಡಿ, ಕಾಫಿ, ಟೀ ದರ ಹೆಚ್ಚಳ ಮಾಡುತ್ತಾರೆ. ಇದರ ಹೊರೆ ಶ್ರೀಸಾಮಾನ್ಯನ ಮೇಲೆ ಬೀಳಲಿದೆ. ಮತದಾನ ಮುಗಿದ ಕೂಡಲೇ ಕೇಂದ್ರ ಬಿಜೆಪಿ ಸರ್ಕಾರ ಬಡ, ಮಧ್ಯಮವರ್ಗದವರ ಬದುಕನ್ನು ದುರ್ಬರ ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಆಡುಗೆ ಅನಿಲ ಪೂರೈಕೆ ಆಗದೆ ಈಗಾಗಲೇ ಹಲವು ಹೊಟೆಲ್ ಗಳು ಬಂದ್ ಆಗಿದ್ದು, ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಈ ಸನ್ನಿವೇಶದಲ್ಲಿ 993 ರೂ. ಪ್ರತಿ ಸಿಲಿಂಡರ್ ಗೆ ಹೆಚ್ಚಳ ಮಾಡುವ ಮೂಲಕ ಕಾರ್ಮಿಕ ದಿನದಂದು ಕೇಂದ್ರ ಸರ್ಕಾರ ತನ್ನ ಕಾರ್ಮಿಕ ವಿರೋಧಿ ನೀತಿ ಪ್ರದರ್ಶಿಸಿದೆ ಎಂದು ತಿಳಿಸಿದ್ದಾರೆ.

ಸರತಿ ಸಾಲಲ್ಲಿ ನಿಂತರೂ ಸಿ.ಎನ್.ಜಿ. ಅನಿಲ ಸಿಗದೆ ತತ್ತರಿಸಿರುವ ಆಟೋ ಚಾಲಕರ ಮೇಲೂ ಕೇಂದ್ರ ಸರ್ಕಾರ ಗದಾ ಪ್ರಹಾರ ಮಾಡಿದೆ. ಯುಪಿಎ ಕಾರ್ಯಕಾಲದಲ್ಲಿ ಅಡುಗೆ ಅನಿಲ ದರ 10-15 ರೂ ಹೆಚ್ಚಳವಾದರೆ, ರೂಪಾಯಿ ಮೌಲ್ಯ ಡಾಲರ್ ಎದುರು ಕೆಲವೇ ಪೈಸೆ ಕುಸಿತವಾದರೂ ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ನಾಯಕರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಅವರು ಈಗ ತಮ್ಮ ತಾಕತ್ತು ಪ್ರದರ್ಶಿಸಲಿ, ಪ್ರಧಾನಿ ನರೇಂದ್ರ ಮೋದಿ ದುರಾಡಳಿತದ ವಿರುದ್ಧ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago