ರಾಜ್ಯ

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್‌ಎಸ್‌ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರು ಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

5 mins ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

14 mins ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

22 mins ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

32 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

48 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

1 hour ago