ಕೊಳ್ಳೇಗಾಲ : ಧರ್ಮದ ಆಧಾರದ ಮೇಲೆ ಪ್ರಚೋದನೆ ಮಾಡುವುದೇ ಬಿಜೆಪಿಯ ಕೆಲಸ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ತಿರುಗೇಟು ನೀಡಿದರು.
ಪಟ್ಟಣದಲ್ಲಿ ಸೋಮವಾರ ಆರೋಗ್ಯ ಇಲಾಖೆಯಿಂದ ಆಯೋಜಿಸಿರುವ ಬೃಹತ್ ಆರೋಗ್ಯ ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಸಂಬಂಧ ಮಾತನಾಡಿದರು.
ಭಾವನಾತ್ಮಕವಾಗಿ ಜನರನ್ನು ಕೆರಳಿಸುವುದೇ ಬಿಜೆಪಿಯವರ ಕೆಲಸ. ಈ ಮೂಲಕ ಅವರು ಅತ್ಯಂತ ಕೀಳು ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಉದ್ದೇಶಪೂರ್ವಕವಾಗಿ ಘಟನೆ ಸೃಷ್ಟಿಸಿ ಕೋಮುವಾದಿ ಬಣ್ಣ ಕಟ್ಟಲಾಗುತ್ತಿದೆ. ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರ ಭಾವನೆಗಳ ಮೇಲೆ ಸಂಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಧಾರ್ಮಿಕ ಚಿಂತನೆ ಎಲ್ಲರಲ್ಲೂ ಇದೆ. ನಮ್ಮದು ಜಾತ್ಯತೀತ ರಾಷ್ಟ್ರ. ಹಿಂದೂ, ಕ್ರೈಸ್ತ, ಹಿಂದೂ ರಾಷ್ಟ್ರ ಮಾಡುತ್ತೇನೆ ಎಂಬುದು ತಪ್ಪು. ಸರ್ಕಾರ ತಪ್ಪು ಮಾಡಿದರೆ ಎತ್ತಿ ತೋರಿಸುವ ಬದಲು ವಿವಾದ ಸೃಷ್ಟಿಸುವುದೇ ಇವರ ಕೆಲಸ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ಪೈಸೆ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ನಮ್ಮ ರಾಜ್ಯಕ್ಕೆ ತೆರಿಗೆ ಹಣವೂ ಬರುತ್ತಿಲ್ಲ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡುತ್ತಿಲ್ಲ ಎಂದು ದೂರಿದರು.
ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ. ದಾರಿ ತಪ್ಪಿಸುವುದು. ರಾಜಕೀಯಕ್ಕಾಗಿ ಜನರನ್ನು ದಾರಿ ತಪ್ಪಿಸಬಾರದು. ಕೋಮು ಭಾವನೆ ಕೆರಳಿಸಬಾರದು ಎಂದರು.
ಹಿಂದುಗಳ ಜೊತೆಗೆ ಎಲ್ಲ ಜನರನ್ನು ಪ್ರೀತಿಸಬೇಕು. ಎಚ್.ಡಿ.ಕುಮಾರಸ್ಬಾಮಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಅವರಿಗೆ ಹಿಂದುಗಳ ಬಗ್ಗೆ ಪ್ರೀತಿ ಹೆಚ್ಚಾಗಿರಬಹುದು ಎಂದು ವ್ಯಂಗ್ಯವಾಡಿದರು.
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…
ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…