ಬೆಂಗಳೂರು: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸುನೀಲ್ ಕುಮಾರ್, ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ದೂರಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…