ರಾಜ್ಯ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಒಂದೆಡೆ ಬಿಜೆಪಿ ವಿಧಾನಸೌಧದ ಬಳಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಕೆ.ಬಿ. ಕೋಳಿವಾಡ ಸಹ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿವೆ. ಅಲ್ಲಿ ಈ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಮಾತನಾಡುತ್ತಿವೆ. ಇದರಿಂದ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಲಹೆ ನೀಡಿದರು.

ತನಿಖೆ ಎದುರಿಸಿ ಅವರು ನಿಷ್ಕಳಂಕಿತರು ಎಂದು ಸಾಬೀತಾದ ನಂತರ ಅವರೇ ಮುಖ್ಯಮಂತ್ರಿಯಾಗಲಿ. ಸಿದ್ದರಾಮಯ್ಯನವರು ರಾಜೀನಾಮೆ ಕೊಡಲ್ಲ ಎನ್ನುತ್ತಿರುವುದು ಅವರ ಅಭಿಪ್ರಾಯ, ಇದು ನನ್ನ ಅಭಿಪ್ರಾಯ ಎಂದು ತಿಳಿಸಿದರು. ಇನ್ನೂ ಮುಂದುವರಿದು ಮಾತನಾಡಿದ ಕೋಳಿವಾಡ ನನಗೂ ಸಿಎಂಗೂ ಹಿಂದೆ ಭಿನ್ನಾಭಿಪ್ರಾಯಗಳಿದ್ದರೂ ಈಗ ಆತ್ಮೀಯವಾಗಿದ್ದೇವೆ. ಆದರೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಲಿ ಎಂದು ಹೇಳುತ್ತಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ, ನನ್ನ ಜತೆ ಯಾರೂ ಇಲ್ಲ ಎಂದು ಹೇಳಿದರು.

andolana

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

3 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

4 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

4 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

4 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

4 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

5 hours ago