ಬೆಂಗಳೂರು: ಎಲ್ಲೆಡೆ ಬಿಸಿಲ ಬೇಗೆ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಹೈರಾಣಾಗಿದ್ದಾರೆ. ಇನ್ನು ಈ ಸುಡು ಬೇಸಿಗೆಯಲ್ಲಿ ಕಪ್ಪು ಕೋಟ್ ಧರಿಸಿ ಕೋರ್ಟಿಗೆ ಬರುತ್ತಿದ್ದ ವಕೀಲರಿಗೆ ಬೇಸಿಗೆಯ ಬಿಸಿ ತುಸು ಹೆಚ್ಚೇ ತಟ್ಟಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 18ರಿಂದ ಮೇ 31ರವರೆಗೆ ವಿಚಾರಣೆಗೆ ಹಾಜರಾಗುವ ರಾಜ್ಯಾದ್ಯಂತ ಜಿಲ್ಲಾ, ವಿಚಾರಣಾ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ.
ಇನ್ನು ವಕೀಲರು ಕಪ್ಪು ಕೋಟಿನ ಬದಲಿಗೆ ಬಿಳಿ ಬಣ್ಣದ ಸಾದಾ ಶರ್ಟ್ ಅಥವಾ ಸಲ್ವಾರ್ ಕಮೀಜ್, ಸೀರೆ ಅಥವಾ ಶಾಂತ ಬಣ್ಣದ ಉಡುಗೆಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 5ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರು ಸಲ್ಲಿಸಿದ್ದ ಮನವಿಯ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದ್ದು, ತಾಪಮಾನವು ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಇಂಥ ಸಂದರ್ಭದಲ್ಲಿ ಕಪ್ಪು ಕೋಟು ಧರಿಸಿ ಬಂದರೆ ಮತ್ತಷ್ಟು ಸಮಸ್ಯೆಯಾಗಲಿದೆ, ಹೀಗಾಗಿ ತಾತ್ಕಾಲಿಕವಾಗಿ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…