ಬೆಳಗಾವಿ : ಇಲ್ಲಿನ ಸಿಪಿಎಡ್ ಮೈದಾನದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಸಿದ ಘಟನೆ ನಡೆದಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾರಂಭಿಸಿದ್ದಾರೆ.
ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸರನ್ನು ವಶಕ್ಕೆ ಪಡೆದರು. ಬಿಜೆಪಿ ಕಾರ್ಯಕರ್ತೆಯ ವಿರುದ್ಧ ಕಾಂಗ್ರೆಸ್ ಮುಖಂಡರು ಕಿಡಿಕಾರಿದರು.





