ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್‍ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಇವಿಎಂ ತುಂಬಾ ಚೆನ್ನಾಗಿ ಕೆಲಸ ಮಾಡಿತ್ತು. ಈಗ ಸೋಲುವ ಭೀತಿ ಎದುರಾದಾಗ ಇದೇ ಇವಿಎಂಗಳ ಮೇಲೆ ದೋಷಾರೋಪ ಮಾಡುತ್ತಿದ್ದೀರಿ. ಇದರ ಬದಲು ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದರು.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಗೋವಿಂದ ಕಾರಾಜೋಳ, ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರ(ಬ್ಯಾಲೆಟ್ ಪೇಪರ್) ಬಳಸಲು ರಾಜ್ಯ ಚುನಾವಣಾ ಆಯೋಗಕ್ಕೆ ತಿದ್ದುಪಡಿ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.
ಇದನ್ನು ಓದಿ:ಉಪ ರಾಷ್ಟ್ರಪತಿ ಚುನಾವಣೆ : ಬಿಜೆಪಿ ಸಂಭಾವ್ಯ ಹೆಸರಲ್ಲಿ ರಾಜ್ಯಪಾಲ ಗೆಹ್ಲೋಟ್ ಹೆಸರು?
ಬಸವರಾಜ ಬೊಮ್ಮಾಯಿ ಮಾತನಾಡಿ, ಬ್ಯಾಲೆಟ್ ಪೇಪರ್‌ಗಳಲ್ಲಿ ಅಕ್ರಮ ಹಾಗೂ ಗೊಂದಲವಾಗುತ್ತಿತ್ತು. ಇದನ್ನು ತಪ್ಪಿಸಲು ಇವಿಎಂಗಳು ಬಂದವು. 2004, 2009ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನವರಿಗೆ ಇವಿಎಂ ಬಗ್ಗೆ ತಕರಾರು ಇರಲಿಲ್ಲ. ಸಿದ್ದರಾಮಯ್ಯ ಗೆದ್ದಿದ್ದೇ ಇದೇ ಇವಿಎಂನಿಂದ. ಇವರು ಗೆಲ್ಲಲು ಇವಿಎಂ ಬೇಕಾಗಿತ್ತು. ಈಗ ಬೆಂಗಳೂರಿನವರಿಗೆ 25 ವರ್ಷ ಹಿಂದೆ ಹೋಗಿ ಮತಪತ್ರದಲ್ಲಿ ಮತದಾನ ಮಾಡಿ ಅಂತಿದ್ದಾರೆ ಎಂದು ವ್ಯಂಗ್ಯವಾಡಿದರು.
ಹಳ್ಳಿಯವರೇ ಇವಿಎಂಗಳನ್ನು ಅಚ್ಚುಕಟ್ಟಾಗಿ ಬಳಸುವುದನ್ನು ಕಲಿತಿದ್ದಾರೆ. ಇವಿಎಂಗಳಲ್ಲಿ ಗೊಂದಲ, ದೋಷ ಇದ್ದರೆ ಬಂದು ತೋರಿಸಿ, ದಾಖಲೆ ಕೊಡಿ ಎಂದರೂ ಯಾರೂ ಮುಂದೆ ಬರಲಿಲ್ಲ. ಈಗ ಇವಿಎಂಗಳ ಬದಲು ಬ್ಯಾಲೆಟ್ ಪೇಪರ್‌ಗಳನ್ನು ಅನುಭವದ ಮೇಲೆ ತರುತ್ತಿದ್ದಾರೆಂದು ಸಿಎಂ ಹೇಳಿದ್ದಾರೆ. ಯಾವ ಅನುಭವ ಇದೆ ಇವರಿಗೆ? ನಿಮಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ದರೆ ರಾಜೀನಾಮೆ ಕೊಡಿ. ರಾಜೀನಾಮೆ ಕೊಟ್ಟು ಇವಿಎಂ ಸರಿಯಿಲ್ಲ ಎಂದು ಹೇಳಿ ಎಂದು ಸವಾಲು ಹಾಕಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…