Mysore
26
few clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.

ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷಗಳವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರಿಸಲಿದೆ.

ಭಾರತದಲ್ಲಿ ಮಾರ್ಚ್.‌3ರಂದು ಮಧ್ಯಾಹ್ನ 3.30ಕ್ಕೆ ಗ್ರಹಣ ಆರಂಭವಾಗಿ ಸಂಜೆ 6.47ಕ್ಕೆ ಮುಕ್ತಾಯವಾಗಲಿದೆ. ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ.

Tags:
error: Content is protected !!