Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ರಾಜ್ಯದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್‌ಐ

BMCRI recognized as the second-best medical college in the state

ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ.

ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ.

ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ‌ ಪಡೆದಿದೆ.

ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ‌ ಮೊಹಮ್ಮದ್ ಮೊಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ್ ಮತ್ತು ಬಿಎಂಸಿಆರ್‌ಐನ ಡೀನ್ ಹಾಗೂ ನಿರ್ದೇಶಕ ಡಾ. ರಾಮೇಶ್ ಕೃಷ್ಣ ಇದು ಬಿಎಂಸಿಆರ್ ಐಗೆ ಸಿಕ್ಕಿದ ಮನ್ನಣೆಯಾಗಿದೆ ಎಂದರು.

ಮೆಡಿಕಲ್ ಕಾಲೇಜುಗಳಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣ, ಆಧುನಿಕ ಸೌಲಭ್ಯಗಳು ಹಾಗೂ ಅತ್ಯಾಧುನಿಕ ಮೂಲ ಸೌಕರ್ಯ ಬಗ್ಗೆ ಅಧ್ಯಯನ ನಡೆಸಿ ಈ ಸಮೀಕ್ಷೆ ನಡೆಸಲಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜು ದೇಶದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದ್ದು, ಈ ಗರಿಮೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಇಂಡಿಯಾ ಟುಡೇ ಪ್ರಕಾರ ಟಾಪ್ ಕಾಲೇಜುಗಳು

* ಕಸ್ತೂರಬಾ ಕಾಲೇಜು, ಮಣಿಪಾಲ್
* *ಬೆಂಗಳೂರು ಮೆಡಿಕಲ್ ಕಾಲೇಜು, ಬೆಂಗಳೂರು*
* ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಂಗಳೂರು
* ಕಸ್ತೂರಬಾ ಮೆಡಿಕಲ್ ಕಾಲೇಜು, ಮಂಗಳೂರು
* ಬೆಳಗಾವಿ ಮೆಡಿಕಲ್ ಕಾಲೇಜು, ಬೆಳಗಾವಿ
* ಎಸ್ ಡಿ ಎಂ ಕಾಲೇಜು, ಧಾರವಾಡ
* ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿ, ಮಂಗಳೂರು
* ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜು, ಬೆಳಗಾವಿ
* ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜು, ವಿಜಯಪುರ
* ಚಲ್ಮಡ ಆನಂದ ರಾವ್ ಮೆಡಿಕಲ್ ಕಾಲೇಜು, ಕಲಬುರಗಿ

Tags:
error: Content is protected !!