ಬೆಂಗಳೂರು : ನಗರದ ಎಂಜಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಬಸ್ ಹೊತ್ತಿ ಉರಿದೆ. ಬಸ್ ನಲ್ಲಿ ಸುಮಾರು ೩೦ ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬಿಎಂಟಿಸಿ ಬಸ್ ರೋಸ್ ಗಾರ್ಡನ್ ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್ ನಲ್ಲಿ ಚಾಲಕ ಬಸ್ ಸ್ಟಾಪ್ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. ಎರಡರಿಂದ ಮೂರು ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ ಸ್ಟಾರ್ಟ್ ಆಗಲಿಲ್ಲ. ಈ ವೇಳೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಇಡೀ ಬಸ್ ಸುಟ್ಟು ಭಸ್ಮವಾಗಿದೆ . ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…