ಬೆಂಗಳೂರು: ಇದೇ ತಿಂಗಳ 13 ರಿಂದ ಆರಂಭವಾಗಲಿದ್ದ 5 ಮತ್ತು 8ನೇ ತರಗತಿಯ ಮಂಡಳಿ( ಬೋರ್ಡ್) ಪರೀಕ್ಷೆಗಳನ್ನು ರದ್ದುಪಡಿಸಿರುವ ಹೈಕೋರ್ಟ್ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಮಹತ್ವದ ತೀರ್ಪು ನೀಡಿದೆ.
ಹೈಕೋರ್ಟ್ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದ್ದು, ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಮಂಡಳಿ ಪರೀಕ್ಷೆ ನಡೆಸಬಹುದು ಎಂದು ಸ್ಪಷ್ಟಪಡಿಸಿದೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರು ಮೇಲ್ಮನವಿ ಸಲ್ಲಿಸಿದ್ದರು.
5, 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಕ್ರಮವಹಿಸಲು ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಮೌಲ್ಯಮಾಪನ ಬದಲಾವಣೆಗೆ ಸರ್ಕಾರ ಕೈಗೊಂಡಿರುವ ನಿರ್ಣಯವು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಂಘವು ಮೇಲ್ಮನವಿಯಲ್ಲಿ ತಿಳಿಸಿತ್ತು.
ಅರ್ಜಿದಾರರ ಪರವಾಗಿ ವಕೀಲ ಕೆ.ವಿ.ಧನಂಜಯ್ ಶಾಸಕಾಂಗದಲ್ಲಿ ಚರ್ಚೆ ಆಗದೇ ಅಧಿಕಾರಿಗಳೇ ನಿರ್ಧಾರ ಮಾಡಿದ್ದರು ಎಂದು ವಾದಿಸಿದರು. ಈ ಆದೇಶದ ಬಳಿಕ ಆಯಾಯ ಶಾಲೆಗಳು ಹೊಸದಾಗಿ ಪರೀಕ್ಷೆ ದಿನಾಂಕ ನಿಗದಿಗೆ ಅವಕಾಶ ಮಾಡಿ ಕೊಡಲಾಗಿದೆ. ಜೊತೆಗೆ
ಪೋಷಕರ ಅಭಿಪ್ರಾಯವನ್ನು ಪಡೆದು, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮವಾಗಿ ನಿರ್ಧರಿಸಿ ಎಂದು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸಲು 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿತ್ತು. ಮಾ.13ರಿಂದ 18ರವರೆಗೆ ಮೌಲ್ಯಾಂಕನ ಪರೀಕ್ಷೆಗೆ ದಿನ ನಿಗದಿ ಮಾಡಿತ್ತು. ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಪರೀಕ್ಷಾ ಕೇಂದ್ರಗಳನ್ನು ರಚಿಸುವಂತೆ ಸೂಚಿಸಲಾಗಿತ್ತು.
ಯಾವುದೇ ಶಾಲೆಯಲ್ಲಿ ಕಡಿಮೆ ಮಕ್ಕಳಿದ್ದರೆ ಅವರಿಗೆ ಸಮೀಪದ ಮತ್ತೊಂದು ಶಾಲೆಯನ್ನು ಪರೀಕ್ಷಾ ಕೇಂದ್ರವಾಗಿಸಲು ಸೂಚಿಸಲಾಗಿತ್ತು. ಆದರೆ, ಇದಕ್ಕೆ ಪೋಷಕರಿಂದ ಕೂಡ ಆಕ್ಷೇಪಗಳು ವ್ಯಕ್ತವಾಗಿತ್ತು. ಹಾಗಾಗಿ ಆಯಾ ಶಾಲೆಗಳನ್ನೇ ಕೇಂದ್ರವಾಗಿಸಲು ಇಲಾಖೆ ಸೂಚಿಸಿತ್ತು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleರಿಲೀಸ್ಗೂ ಮುನ್ನವೇ ಕಿಂಗ್ ಖಾನ್ ʼಜವಾನ್ʼ ಚಿತ್ರದ ವಿಡಿಯೋ ಲೀಕ್..!
Next Article `KPCC ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಇನ್ನಿಲ್ಲ’