ರಾಜ್ಯ

ಎಲ್ಲರನ್ನೂ ಸಮಾಧಾನಪಡಿಸುವುದು ಕಷ್ಟ; ನಿಗಮ ಮಂಡಳಿ ನೇಮಕಾತಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಕಾಂಗ್ರೆಸ್‌ ನಿಗಮ ಮಂಡಳಿ ಇನ್ನೂ ಸಹ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಈ ಕುರಿತಾಗಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ಸಹ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ಸಿಕ್ಕಿಲ್ಲ.

ನಿಗಮ ಮಂಡಳಿ ನೇಮಕಾತಿ ಕುರಿತಾಗಿ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್‌ ಮಂಡಳಿ ಮತ್ತು ನಿಗಮಗಳ ಅಧ್ಯಕ್ಷರ ನೇಮಕಕ್ಕೂ ಮುನ್ನ ತನ್ನ ಸಲಹೆ ಕೇಳಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ನಿಗಮ ಮಂಡಳಿ ವಿಚಾರವಾಗಿ ಕಾಂಗ್ರೆಸ್‌ ನಾಯಕರಲ್ಲಿ ಅಸಮಾಧಾನವಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿತ್ತು.

ಸದ್ಯ ಈ ವಿಚಾರವಾಗಿ ಮಾಧ್ಯಮದವರ ಜತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರ ಸಲಹೆಗಗೆ ಕಿವಿ ಕೊಡುವುದು ಕಷ್ಟ, ಅವರ ಜತೆ ಮಾತನಾಡಿದ್ದೇನೆ ಎಂದು ಹೇಳಿಕೆಯನ್ನು ನೀಡಿದರು. ನಿಗಮ ಮಂಡಳಿ ನೇಮಕಾತಿ ಬಗ್ಗೆ ನಾನು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಚರ್ಚೆ ನಡೆಸಿ ಬಳಿಕ ಹೈಕಮಾಂಡ್‌ ಅನುಮೋದನೆಗಾಗಿ ಪಟ್ಟಿಯನ್ನು ಸುರ್ಜೇವಾಲಾ ಅವರಿಗೆ ನೀಡಲಾಗಿದೆ, ಪಟ್ಟಿಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಅವರ ಸಹಿ ಆಗಬೇಕಿದೆ ಎಂದೂ ಸಹ ಸಿದ್ದರಾಮಯ್ಯ ತಿಳಿಸಿದರು.

andolana

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

29 mins ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

4 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

5 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

5 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

5 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

6 hours ago