ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮೈಸೂರಿನ ಸರಸ್ವತಿಪುರಂ ನಿವಾಸಿಗಳಾದ ಶಂಕರಪ್ಪ ಹಾಗೂ ಸಿಂಧು ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಗಳಾಗಿದ್ದರು.
ಮೈಸೂರಿನ ಸರಸ್ವತಿಪುರಂನಿಂದ ಸುಮಾರು 28 ಜನರಿದ್ದ ಬಿಪಿಒ ಉದ್ಯೋಗಿಗಳ ತಂಡ ಪ್ರವಾಸಕ್ಕಾಗಿ ಉಡುಪಿಗೆ ತೆರಳಿತ್ತು. ಅಲ್ಲಿ ಎರಡು ಖಾಸಗಿ ಪ್ರವಾಸಿ ದೋಣಿಗಳನ್ನು ಬಾಡಿಗೆಗೆ ಪಡೆದು ಪ್ರತಿ ಬೋಟ್‌ನಲ್ಲಿ ತಲಾ 14 ಜನರಂತೆ ಹಂಚಿಕೊಂಡು ಸಮುದ್ರ ವಿಹಾರಕ್ಕೆ ತೆರಳಿದ್ದರು.
ಕೋಡಿಬೆಂಗ್ರೆ ಅಳಿವೆ ಬಾಗಿಲು ಬಳಿ ಅಲೆಗಳ ಅಬ್ಬರ ಹೆಚ್ಚಾದ ಪರಿಣಾಮ ಅನಿರೀಕ್ಷಿತವಾಗಿ ಬಂದ ಭಾರೀ ಗಾತ್ರದ ಅಲೆಯೊಂದು ಬೋಟ್‌ಗೆ ಅಪ್ಪಳಿಸಿದೆ. ಪರಿಣಾಮ ಬೋಟ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಬೋಟ್‌ನಲ್ಲಿದ್ದ 14 ಮಂದಿಯೂ ಸಮುದ್ರದ ಪಾಲಾಗಿದ್ದಾರೆ.
ಈ ವೇಳೆ ಸ್ಥಳೀಯ ಮೀನುಗಾರರು ಹಾಗೂ ಈಜುಗಾರರು ಸ್ಥಳಕ್ಕೆ ಧಾವಿಸಿ ಮುಳುಗುತ್ತಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಶಂಕರಪ್ಪ ಹಾಗೂ ಸಿಂಧು ಮೃತಪಟ್ಟಿದ್ದಾರೆ.
ಅದರಲ್ಲಿ ಧರ್ಮರಾಜ್ ಹಾಗೂ ದಿಶಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತನಿಖೆಯ ಪ್ರಕಾರ ಈ ದುರಂತಕ್ಕೆ ಸುರಕ್ಷತಾ ನಿಯಮಗಳ ಉಲ್ಲಂಘನೆಯೇ ಕಾರಣ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೋಟ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…