ರಾಯಚೂರು: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆಂದು ತೆರಳಿದ್ದ ಮೂವರು ಸ್ನೇಹಿತರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕೊಚ್ಚಿ ಹೋಗಿದ್ದ ಘಟನೆ ನಡೆದಿದೆ.
ಆ ಭಾಗದಲ್ಲಿ ಧಾರಾಕಾರ ಮಳೆಯಾದ ಪರಿಣಾಮ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ನದಿ ತೀರಕ್ಕೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ನೀಡಿದ್ದರೂ, ಮೂವರು ನಿನ್ನೆ ನದಿಯಲ್ಲಿ ಈಜಲು ಹೋಗಿ ಕೊಚ್ಚಿಕೊಂಡು ಹೋಗಿದ್ದರು. ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಇಂದು ಮೂವರ ಮೃತದೇಹ ಪತ್ತೆಯಾಗಿದೆ.
ಹಾಸನ ಮೂಲದ ಅಜಿತ್, ಸಚಿನ್ ಹಾಗೂ ಪ್ರಮೋದ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಈ ಸಂಬಂಧ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.





