ರಾಜ್ಯ

ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮೂವರ ಶವ ಪತ್ತೆ

ರಾಯಚೂರು: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆಂದು ತೆರಳಿದ್ದ ಮೂವರು ಸ್ನೇಹಿತರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕೊಚ್ಚಿ ಹೋಗಿದ್ದ ಘಟನೆ ನಡೆದಿದೆ.

ಆ ಭಾಗದಲ್ಲಿ ಧಾರಾಕಾರ ಮಳೆಯಾದ ಪರಿಣಾಮ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ನದಿ ತೀರಕ್ಕೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ನೀಡಿದ್ದರೂ, ಮೂವರು ನಿನ್ನೆ ನದಿಯಲ್ಲಿ ಈಜಲು ಹೋಗಿ ಕೊಚ್ಚಿಕೊಂಡು ಹೋಗಿದ್ದರು. ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಇಂದು ಮೂವರ ಮೃತದೇಹ ಪತ್ತೆಯಾಗಿದೆ.

ಹಾಸನ ಮೂಲದ ಅಜಿತ್‌, ಸಚಿನ್‌ ಹಾಗೂ ಪ್ರಮೋದ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಈ ಸಂಬಂಧ ಮಂತ್ರಾಲಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

3 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

3 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

4 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

4 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

4 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

4 hours ago