Mysore
33
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ

ಬೆಂಗಳೂರು: ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿದೆ. ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್‌ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.

ಬೆದರಿಕೆ ಮೇಲ್‌ ಬಗ್ಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದರೆ.

ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್‌ ಸಿಬ್ಬಂಧಿ ಹಾಗೂ ಬಾಂಬ್‌ ಸ್ಕ್ವಾಡ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!