ಬೆಂಗಳೂರು: ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.
ಬೆದರಿಕೆ ಮೇಲ್ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದರೆ.
ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್ ಸಿಬ್ಬಂಧಿ ಹಾಗೂ ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…