ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ ಸಂದೇಶ ಕಳುಹಿಸಲಾಗಿದೆ.
ಸಂದೇಶ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಎಚ್ಚೆತ್ತ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ..
ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಚೆನ್ನೈ ಅಪರಿಚಿತರಿಂದ ಬೆದಿರಿಕೆ ಪತ್ರದ ಮೇಲೆ ಬಂದಿದೆ. ಈ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್ ಸ್ಕ್ವಾಡ್‌ನಿಂದ ವಿಮಾನ ನಿಲ್ದಾಣದ ಸುತ್ತ ಪರಿಶೀಲನೆ ನಡೆಸಲಾಗಿದೆ.
ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಮೇಲೆ ಮಾಡಿರುವ ವ್ಯಕ್ತಿ ಯಾರೆಂದು ಪರಿಶೀಲನೆ ನಡೆಸಲಾಗುತ್ತಿದೆ.