ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮೂವರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸ್ಟಾರ್ ಹೋಟೆಲ್‌ಗಳಿಗೆ ಮಧ್ಯರಾತ್ರಿ ೨ ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇಂದು(ಮೇ.೨೩) ಬೆಳಿಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಪೊಲೀಸರು ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಬಾಂಬ್ ಸ್ಕ್ವಾಡ್ ಸಹ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿವೆ.





