ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ.
ನಿಮ್ಮ ಮನೆಗೆ ಆರ್‌ಡಿಎಕ್ಸ್ ಬಾಂಬ್ ಇಟ್ಟಿದ್ದೇವೆ. ಅದು ಸ್ಪೋಟಗೊಳ್ಳುತ್ತದೆ ಎಂದು ಇ-ಮೇಲ್ ಕಳುಹಿಸಲಾಗಿದೆ.
ಇದನ್ನು ಓದಿ: ಸಿಎಂ ಹಾಗೂ ಡಿಸಿಎಂ ಮನೆಗೆ ಬಾಂಬ್ ಬೆದರಿಕೆ: ಪೊಲೀಸರ ಹದ್ದಿನ ಕಣ್ಣು
ಅರ್ನಾ ಅಶ್ವಿನ್ ಶೇಖರ್ ಎಂಬ ಇಮೇಲ್ ಐಡಿಯಿಂದ ಬೆದರಿಕೆ ಕರೆ ಬಂದಿದೆ. ನಂತರ ಪೊಲೀಸರು ನಿವಾಸಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಬಳಿಕ ಅದು ಹುಸಿ ಬಾಂಬ್ ಸಂದೇಶ ಎಂದು ಗೊತ್ತಾಗಿದೆ.
ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಅಶ್ವಥ್ ನಾರಾಯಣಸ್ವಾಮಿ ಎಂಬುವವರು ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.





