ಬೆಂಗಳೂರು: ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ.
ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್.11ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‍ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ: ಮೈಸೂರು | ಮಕ್ಕಳ ರಕ್ಷಣಾ ಘಟಕಕ್ಕೆ ಬಾಂಬ್ ಬೆದರಿಕೆ : ದೂರು ದಾಖಲು
ಈಮೇಲ್‍ನಲ್ಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರ ನಿವಾಸಗಳಲ್ಲಿ ನಾಲ್ಕು ಆರ್‍ಡಿಎಕ್ಸ್ ಹಾಗೂ ಸುಧಾರಿತ ಐಇಡಿಗಳನ್ನು ಇರಿಸಲಾಗಿದೆ. ಅವುಗಳನ್ನು ರಿಮೋಟ್ ಮೂಲಕ ಸ್ಫೋಟಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು.
ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಾಂಬ್ ಪತ್ತೆ ದಳ ಎರಡೂ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಆದರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‍ಎಸ್) ಸೆಕ್ಷನ್ 351(4) (ಕ್ರಿಮಿನಲ್ ಬೆದರಿಕೆ) ಮತ್ತು 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ತಮಿಳುನಾಡಿನ ವ್ಯಕ್ತಿಯೊಬ್ಬರ ಇಮೇಲ್ ಐಡಿಯನ್ನು ಟ್ರ್ಯಾಕ್ ಮಾಡಲಾಗಿದ್ದು, ಆರೊಪಿಯನ್ನು ಬಂಧಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಇದೇ ರೀತಿಯ ಬೆದರಿಕೆಗಳು ಮತ್ತುಮಾಹಿತಿಗಳು ಪದೇ ಪದೇ ಇಮೇಲ್ ಮೂಲಕ ಬರುತ್ತಿವೆ. ಬೆದರಿಕೆಯ ಇಮೇಲ್‍ಗಳ ಕಳುಹಿಸುವವರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ಸಹ ರಚಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…