ಬೆಂಗಳೂರು : ನಗರದ 15 ಕ್ಕೂ ಹೆಚ್ಚು ಶಾಲೆಗಳಿಗೆ ಬೆಳ್ಳಂ ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿತ್ತು. ಡಿಸಿಎಂ ಡಿಕೆಶಿ ನಿವಸದ ಬಳಿ ಇರುವ ಶಾಲೆಗೂ ಕೂಡ ಬೆದರಿಕೆ ಕೇಳಿಬಂದಿತ್ತು. ಇದೀಗ ಡಿಕೆಶಿ ಶಾಲೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಡಿಕೆಶಿ ಟಿವಿಯಲ್ಲಿ ವಿಷಯ ತಿಳಿದು ಗಾಬರಿಯಾದೆ. ನೀವ್ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಎಂಬುದು ತಿಳಿದು ಬಂದಿದೆ. 8-10 ಸಲ ಹುಸಿ ಕರೆ ಮಾಡುತ್ತಾರೆ. ಯಾವಾಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು ಯಾವುದನ್ನೂ ಕಡೆಗಣಿಸಬಾರದು ಎಂದಿದ್ದಾರೆ.
ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದರು.
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.
ಬೆದರಿಕೆ ಮೇಲ್ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.
ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್ ಸಿಬ್ಬಂಧಿ ಹಾಗೂ ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…