ಬೆಂಗಳೂರು: ಬೆಂಗಳೂರಿನ 40 ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಮೇಳೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಆರ್.ಆರ್.ನಗರ, ಕೆಂಗೇಡಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. 40 ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಮೇಲ್ ಮಾಡಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದಾರೆ.
ಬಾಂಬ್ ಬೆದರಿಕೆ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಬಾಂಬ್ ಬೆದರಿಕೆ ಯಾಕೆ ಬಂದಿದೆ ಎಂದು ಪರಿಶೀಲನೆ ಮಾಡುತ್ತೇವೆ. ಈ ಹಿಂದೆಯೂ ಹಲವು ಬಾರಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ನಾವು ಮೊದಲು ಪರಿಶೀಲನೆ ಮಾಡುತ್ತೇವೆ. ಯಾವುದನ್ನೂ ಕೂಡ ಲಘುವಾಗಿ ತೆಗೆದುಕೊಳ್ಳಲ್ಲ ಎಂದಿದ್ದಾರೆ.





