ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ಫೆ.28ರಿಂದ 3 ರವರೆಗೆ ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼ ವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ.
ಪುಸ್ತಕ ಮೇಳಕ್ಕೆ ಸಂಬಂಧಿಸಿದಂತೆ ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಆಸಕ್ತಿಯುಳ್ಳವರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ವಿಳಾಸವನ್ನು ವಿವರಗಳೊಂದಿಗೆ ಫೆ.3ರ ಒಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.