ರಾಜ್ಯ

ಪುಸ್ತಕ ಬಹುಮಾನ: ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ

ಮೈಸೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಪ್ರಕಟಿಸಿರುವ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್‌ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅಥವಾ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ಬೆಂಗಳೂರಿನ ಕನ್ನಡ ಭವನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟಾರ್ ಕಚೇರಿಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಜುಲೈ 25 ರೊಳಗೆ ಕಳುಹಿಸುವುದು. ಅರ್ಜಿಗಳನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ಹಾಗೂ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ದೂ.ಸಂ:080-22113146 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಡಿ.ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

4 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

26 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

3 hours ago