cm siddaramiah (3)
ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು, ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್, ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಈ ಬಾರಿ ಮೈಸೂರು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಲೇಖಕಿ ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡಕ್ಕೆ ಬೂಕರ್ ತಂದುಕೊಟ್ಟ ಮೊದಲ ಸಾಹಿತಿ ಬಾನು
ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಸಿರಿಗನ್ನಡದ ಸಾಹಿತ್ಯಕ್ಕೆ ದೊರೆತ ಮೊದಲ ಪ್ರಶಸ್ತಿ ಇದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಮನ್ನಣೆ ಸಿಕ್ಕಂತಾಗಿದೆ.
ಇನ್ನು ಕನ್ನಡ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆ ಅಪಾರ. ಹೀಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ದಕ್ಕಿವೆ. ಕುಬ, ಬಡವರ ಮಗಳು ಹೆಣ್ಣಲ್ಲ ಕಾದಂಬರಿ, ಹೆಜ್ಜೆ ಮೂಡಿದ ಹಾದಿ, ಬೆಂಕಿಮಳೆ, ಎದೆಯ ಹಣತೆ ಅವರು ಬರೆದ ಕಥಾಸಂಕಲನವಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…