ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ.
ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮೊಹಮ್ಮದ್ ಜಾವೇದ್ ಹಾಗೂ ವಸಂತನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರುದ್ರಮುನಿ ಅವರನ್ನು ಅಮಾನತು ಮಾಡಿ ಜಿಬಿಎ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.





