Mysore
26
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ: ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.

ಘಟನೆ ನಂತರ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್‌ ಭೇಟಿ ನೀಡಿ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದರು. ಬಳಿಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.

ತನಿಖಾ ತಂಡದಲ್ಲಿ ಪೊಲೀಸ್‌ ಅಧೀಕ್ಷಕ ದರ್ಜೆಯ ಅಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಓರ್ವ ಜಿಲ್ಲಾ ನ್ಯಾಯಾಧೀಶರು, ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯ ಇಂಜಿನಿಯರ್‌ ಇರಲಿದ್ದಾರೆ.

Tags:
error: Content is protected !!