ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ.
ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ೧೩ ವರ್ಷದ ಪ್ರೇಮ್ ಕುಮಾರ್ ಎಂಬ ಬಾಲಕ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕಳೆದ ಒಂದು ವಾರದಿಂದ ಪ್ರೇಮ್ ಕುಮಾರ್ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಸಹ ನೀಡಲಾಗಿತ್ತು. ಆದರೆ ಇಂದು ಪ್ರೇಮ್ ಕುಮಾರ್ ಕೊನೆಯುಸಿರೆಳೆದಿದ್ದಾನೆ. ಇನ್ನು ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್ ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.